ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್ ಪಲ್ಟಿಯಾಗಿ 4 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ
Image Credit source: India TV
ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್ ಪಲ್ಟಿಯಾಗಿ 4 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದಲ್ಲಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರ ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಮತ್ತಷ್ಟು ಓದಿ: BMTC ಬಸ್ನಲ್ಲಿ ಅಗ್ನಿ ದುರಂತ, ಮಲಗಿದ್ದ ಕಂಡಕ್ಟರ್ ಸಜೀವ ದಹನ, ಡ್ರೈವರ್ ಪಾರು
ಬಿಹಾರದ ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಜಿಲ್ಲಾಡಳಿತವು ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು.
ಏತನ್ಮಧ್ಯೆ, ಎಲ್‌ಜಿ ಅವರ ನಿರ್ದೇಶನಗಳನ್ನು ಅನುಸರಿಸಿ, ಪುಲ್ವಾಮಾ ಡೆಪ್ಯುಟಿ ಕಮಿಷನರ್ (ಡಿಸಿ) ಬಸೀರ್ ಉಲ್ ಹಕ್ ಪ್ರತಿ ಸಂತ್ರಸ್ತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಸಹಾಯವನ್ನು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡವರಿಗೆ 25,000 ರೂ. ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 10,000 ರೂ.ಪರಿಹಾರವನ್ನು ಹಕ್ ಘೋಷಿಸಿದ್ದಾರೆ ಎಂದು ಅವರು ಹೇಳಿದರು .
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ