9.4 C
Munich
Monday, March 13, 2023

Rahul Gandhi talk on interfere of foreign powers in Indian democracy not pardonable – Pralhad Joshi in Lok Sabha | ಭಾರತದ ಪ್ರಜಾಪ್ರಭುತ್ವದಲ್ಲಿ ವಿದೇಶಿ ಶಕ್ತಿಗಳಿಗೆ ಹಸ್ತಕ್ಷೇಪ ಮಾಡುವ ರೀತಿಯಲ್ಲಿ ರಾಹುಲ್ ಗಾಂಧಿ ಮಾತಾಡಿರುವುದು ಅಕ್ಷಮ್ಯ ಅಪರಾಧ -ಸದನದಲ್ಲಿ ಪ್ರಲ್ಹಾದ್ ಜೋಶಿ ಕಿಡಿ

ಓದಲೇಬೇಕು

ಮೊದಲನೆಯದಾಗಿ ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಅವರೇ ಸರಿಯಾಗಿ ಮನ್ನಣೆ ನೀಡಿಲ್ಲ. ಹಾಗಾಗಿ ರಾಹುಲ್ ಗಾಂಧಿ ಅವರು ಸದನಕ್ಕೆ ಬಂದು ಕ್ಷಮೆ ಕೇಳಬೇಕು ಎಂದು ಇದೇ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದರು.

ರಾಹುಲ್ ಗಾಂಧಿ ಮಾತುಗಳು ಅಕ್ಷಮ್ಯ ಅಪರಾಧ – ಲೋಕಸಭೆಯಲ್ಲಿ ಶಪ್ರಲ್ಹಾದ್ ಜೋಶಿ ಕಿಡಿ

ನವದೆಹಲಿ: ಭಾರತದ ಪ್ರಜಾಪ್ರಭುತ್ವ (Democracy) ಅಪಾಯದಲ್ಲಿದೆ ಎಂದು ವಿದೇಶಗಳಲ್ಲಿ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಲೋಕಸಭೆಯಲ್ಲಿ (Lok Sabha) ಇಂದು ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದರು. ಭಾರತದ ಪ್ರಜಾಪ್ರಭುತ್ವ ಸೇರಿದಂತೆ ದೇಶದ ಆಂತರಿಕ ವಿಚಾರಗಳ ಬಗ್ಗೆ ವಿದೇಶದಲ್ಲಿ ರಾಹುಲ್ ಗಾಂಧಿ ಬಾಯಿಗೆ ಬಂದಂತೆ ಮಾತಾಡಿದ್ದಾರೆ. ಸದನದಲ್ಲಿ ವಿಪಕ್ಷಗಳ ಮೈಕ್ ಗಳು ಆಫ್ ಮಾಡಿ ಪ್ರತಿಪಕ್ಷಗಳ ಧ್ವನಿಯನ್ನ ದಮನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕಸಭೆಯ ಸ್ಪೀಕರ್ ವಿರುದ್ಧವೇ ರಾಹುಲ್ ಗಾಂಧಿ ವಿದೇಶಗಳ ನೆಲದಲ್ಲಿ ಮಾತಾಡಿದ್ದಾರೆ. ಸದನದಲ್ಲಿ ಯಾವತ್ತು ವಿಪಕ್ಷಗಳ ಮೈಕ್ ಆಫ್ ಆಗಿಲ್ಲ. ಆದರೂ ಆಧಾರ ರಹಿತ ಆರೋಪವನ್ನ ವಿದೇಶಗಳಲ್ಲಿ ರಾಹುಲ್ ಗಾಂಧಿ ಮಾಡಿದ್ದು, ಸದನದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಖಂಡಿಸಿದರು.

ರಾಹುಲ್ ಗಾಂಧಿ ಅವರು ಸದನಕ್ಕೆ ಬಂದು ಕ್ಷಮೆ ಕೇಳಬೇಕು ಎಂದು ಇದೇ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದರು. ಮೊದಲನೆಯದಾಗಿ ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಅವರೇ ಸರಿಯಾಗಿ ಮನ್ನಣೆ ನೀಡಿಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಚಿವ ಸಂಪುಟ ತೆಗೆದುಕೊಂಡ ಸುಗ್ರೀವಾಜ್ಞೆಯನ್ನ ರಾಹುಲ್ ಗಾಂಧಿ ಮಾಧ್ಯಮಗಳ ಎದುರು ಹರಿದು ಹಾಕಿದ್ದರು. ಸಂಪುಟದ ನಿರ್ಧಾರವನ್ನ ನಾನ್ಸೆನ್ಸ್ ಎಂದಿದ್ದರು. ಅಂತಹ ವ್ಯಕ್ತಿಗೆ ದೇಶದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ನೆಲಗಳಲ್ಲಿ ಹೋಗಿ ಮಾತಾಡುವ ಯಾವ ಅರ್ಹತೆಯೂ ಇಲ್ಲ ಎಂದು ರಾಹುಲ್ ಗಾಂಧಿ ವಿರುದ್ಧ ಪ್ರಲ್ಹಾದ ಜೋಶಿಯವರು ಕಿಡಿ ಕಾರಿದರು.

ವಿಶ್ವಗುರು ಬಸವಣ್ಣ ಅವರು ಅನುಭವ ಮಂಟಪದ ಮೂಲಕ 12 ನೇ ಶತಮಾನದಲ್ಲಿಯೇ ದೇಶದಲ್ಲಿ ಪ್ರಜಾಪ್ರಭುತ್ವವನ್ನ ಜಾರಿಗೆ ತರಲು ಪ್ರಯತ್ನಿಸಿದವರು. ಬಸವಣ್ಣನವರ ಪ್ರಜಾಪ್ರಭುತ್ವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಗಳಲ್ಲಿ ಮಾತಾಡಿ ದೇಶದ ಗೌರವ ಹೆಚ್ಚಿಸುತ್ತಾರೆ. ಬಸವಣ್ಣನವರ ಪ್ರತಿಮೆಯನ್ನ ಲಂಡನ್ ನಲ್ಲಿ ಸ್ಥಾಪಿಸಲಾಗಿದೆ. ಆದ್ರೆ ರಾಹುಲ್ ಗಾಂಧಿ ಅದೇ ಲಂಡನ್ ಗೆ ಹೋಗಿ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅಂತಾರೆ. ಇವರಿಗೆ ನಾಚಿಕೆಯಾಗಬೇಕು ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

Also Read:

ರಾಹುಲ್ ಗಾಂಧಿ ಭಾರತದ ಏಕತೆಗೆ ಅತ್ಯಂತ ಅಪಾಯಕಾರಿ, ಪಪ್ಪು ಬಗ್ಗೆ ವಿದೇಶಿಗರಿಗೆ ಗೊತ್ತಿಲ್ಲ: ಕಿರಣ್ ರಿಜಿಜು

ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ ಅವರು ದೇಶದಲ್ಲಿ‌ ತುರ್ತು ಪರಿಸ್ಥಿತಿ ಹೇರಿ ವಿಪಕ್ಷಗಳ ನಾಯಕರನ್ನ ಅರೆಸ್ಟ್ ಮಾಡಿಸಿದ್ದರು. ಆಗ ಪ್ರಜಾಪ್ರಭುತ್ವ ಚೆನ್ನಾಗಿತ್ತಾ..? ಎಂದು ಸದನದಲ್ಲಿ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ಸದಸ್ಯರನ್ನ ಇದೇ ವೇಳೆ ತಿವಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!