9.6 C
Munich
Wednesday, March 29, 2023

RCB Cricketer Dinesh Karthik meets Yash: DK shares photo with caption Salaam Rocky Bhai | Yash: ರಾಕಿ ಭಾಯ್ ಯಶ್​ಗೆ ಸಲಾಂ ಹೇಳಿದ ಕ್ರಿಕೆಟಿಗ ದಿನೇಶ್ ಕಾರ್ತಿಕ್

ಓದಲೇಬೇಕು

Dinesh Karthik Meets Yash: ಕ್ರಿಕೆಟರ್​ ದಿನೇಶ್ ಕಾರ್ತಿಕ್ ಮತ್ತು ಸ್ಯಾಂಡಲ್​ವುಡ್ ಸ್ಟಾರ್ ಯಶ್ ಪರಸ್ಪರ ಭೇಟಿಯಾಗಿದ್ದಾರೆ. ಈ ಸಂದರ್ಭದ ಫೋಟೋವನ್ನು ದಿನೇಶ್ ಕಾರ್ತಿಕ್ ಅವರ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಯಶ್, ದಿನೇಶ್ ಕಾರ್ತಿಕ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಯಾಂಡಲ್​ವುಡ್ ಸಿನಿಮಾ ಸೆಲೆಬ್ರಿಟಿಗಳ ಕೆಸಿಸಿ (KCC) ಟೂರ್ನಿ ಜೋರಾಗಿ ನಡೆಯುತ್ತಿದೆ. ಈ ಪಂದ್ಯಗಳಲ್ಲಿ ನಟ ಯಶ್​ ಭಾಗವಹಿಸಿಲ್ಲ. ಆದರೂ ಕ್ರಿಕೆಟಿಗರಿಗೆ ಯಶ್ ದೂರವೇನಲ್ಲ. ಇದಕ್ಕೆ ತಾಜಾ ಸಾಕ್ಷಿಯಾಗಿ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಭಾರತ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ (Dinesh Karthik) ಅವರು ನಟ ಯಶ್ ಅವರನ್ನು ಭೇಟಿಯಾಗಿದ್ದಾರೆ. ಯಶ್ ಅವರೊಟ್ಟಿಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆರ್​ಸಿಬಿ ಆಟಗಾರರೂ ಆಗಿರುವ ದಿನೇಶ್ ಕಾರ್ತಿಕ್, ತಮ್ಮ ಹಾಗೂ ನಟ (Yash) ಯಶ್​ರ ಫೋಟೋಗೆ ‘ಸಲಾಂ ರಾಕಿ ಭಾಯ್’ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ.

ಯಾವುದೋ ಕಾರ್ಯಕ್ರಮದಲ್ಲಿ ದಿನೇಶ್ ಹಾಗೂ ಯಶ್ ಭೇಟಿಯಾಗಿದ್ದು, ಭೇಟಿಯ ಉದ್ದೇಶ ಮತ್ತು ಸ್ಥಳದ ಬಗ್ಗೆ ಮಾಹಿತಿ ಸದ್ಯಕ್ಕಿಲ್ಲ. ಆದರೆ ಈ ಫೋಟೋ ಯಶ್ ಅಭಿಮಾನಿಗಳಿಗಂತೂ ಖುಷಿ ನೀಡಿದೆ. ‘ಬೆಂಗಳೂರು ಬ್ಲಡ್’ ಎಂದು ಕೆಲವು ನೆಟ್ಟಿಗರು ಕಮೆಂಟ್ ಸಹ ಮಾಡಿದ್ದಾರೆ. ದಿನೇಶ್ ಕಾರ್ತಿಕ್ ಮಾತ್ರವೇ ಅಲ್ಲದೆ ಕೆಲವು ದಿನಗಳ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಹಾರ್ದಿಕ್ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್ ಪಾಂಡ್ಯ ಕೂಡ ನಟ ಯಶ್ ಅವರನ್ನು ಭೇಟಿಯಾಗಿದ್ದರು. ಆ ಚಿತ್ರವೂ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ



ಸಿನಿಮಾ ವಿಚಾರಕ್ಕೆ ಬರೋದಾದರೆ, ‘ಕೆಜಿಎಫ್ 2’ ಬಳಿಕ ಇನ್ನೂ ಯಾವ ಸಿನಿಮಾವನ್ನು ಘೋಷಿಸದಿರುವ ಯಶ್ ಅವರ ನಡೆ ಕುತೂಹಲ ಮೂಡಿಸಿದೆ. ತಮ್ಮ ಮುಂದಿನ ಸಿನಿಮಾಕ್ಕಾಗಿ ಅವರು ಭರ್ಜರಿ ಯೋಜನೆ ರೂಪಿಸುತ್ತಿದ್ದಾರೆ. ಆದಷ್ಟು ಬೇಗ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ

ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದ ಯಶ್​:

‘ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ’ ಎಂದು ಜನ್ಮದಿನದ (ಜನವರಿ 8) ಸಂದರ್ಭದಲ್ಲಿ ಯಶ್​ ಬರೆದುಕೊಂಡಿದ್ದರು. ಅವರ ಮುಂದಿನ ಪ್ರಾಜೆಕ್ಟ್​​ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ದೊಡ್ಡ ದೊಡ್ಡ ನಿರ್ದೇಶಕರ ಹೆಸರುಗಳು ಕೇಳಿಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!