3.5 C
Munich
Monday, March 27, 2023

Rishab Shetty Speech | Kantara Actor Speech in Kannada At UN Meeting, Here Is The Full Details | ವಿಶ್ವಸಂಸ್ಥೆಯಲ್ಲಿ ಪರಿಸರ ಸಂರಕ್ಷಣೆ ಮಹತ್ವ ಸಾರಿದ ರಿಷಬ್ ಶೆಟ್ಟಿ: ಭಾಷಣ ಇಲ್ಲಿದೆ

ಓದಲೇಬೇಕು

Rishab Shetty Speech at UN: ವಿಶ್ವಸಂಸ್ಥೆಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಪರಿಸರ ಸಂರಕ್ಷಣೆ ಹಾಗೂ ಕಾಡಂಚಿನ ಜನರ ಸಮಸ್ಯೆಗಳ ಮೇಲೆ ಅವರು ಬೆಳಕು ಚೆಲ್ಲಿದ್ದಾರೆ. ರಿಷಬ್ ಶೆಟ್ಟಿ ಭಾಷಣ ಇಲ್ಲಿದೆ.

ರಿಷಬ್ ಶೆಟ್ಟಿ

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಇಂದು (ಮಾರ್ಚ್ 16) ಜಿನಿವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ (UN Annual Meeting) ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ತಮ್ಮ ಭಾಷಣವನ್ನು ಟ್ವಿಟ್ಟರ್ (Twitter) ಖಾತೆಯಲ್ಲಿಯೂ ರಿಷಬ್ ಹಂಚಿಕೊಂಡಿದ್ದಾರೆ. ಅದು ಇಂತಿದೆ, ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ. ಪರಿಸರ ಸುಸ್ಥಿರತೆಯ ಶೋಧನೆಗೆ ಜಾಗತಿಕ ಏಜೆನ್ಸಿಗಳು ಹಾಗೂ ಸರ್ಕಾರದ ಸಂಸ್ಥೆಗಳ ಮುಂಚೂಣಿಯಲ್ಲಿವೆ. ಜೊತೆಗೆ ಭಾರತದಲ್ಲಿ ನಾಗರಿಕ ಸಮಾಜ ಸಹ ಸ್ಥಳೀಯ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ. ಇಂತಹ ಪರಿಸರ ಪ್ರಜ್ಞೆಗೆ ಸಿನಿಮಾ ಎಂಬ ಮಾಧ್ಯಮವು ಕನ್ನಡಿ ಹಿಡಿಯುತ್ತದೆ ಹಾಗೂ ವಾಸ್ತವವನ್ನು ಜಗತ್ತಿಗೆ ತೋರಿಸುವ ಪ್ರಮುಖ ಪಾತ್ರ ನಿರ್ವಹಿಸುತ್ತವೆ, ಹಲವಾರು ಭಾರತೀಯ ಸಿನಿಮಾಗಳು ಕಾಲ್ಪನಿಕ ಹಾಗೂ ವಾಸ್ತವ ಕತೆಗಳ ಮೂಲಕ ಪರಿಸರ ಸಂರಕ್ಷಣೆಯ ವಿಚಾರ ಹೇಳಿದ್ದು, ಈ ಕುರಿತ ಜಾಗೃತಿ ಮೂಡಿಸಿವೆ ಎಂಬುದು ನಮ್ಮ ಹೆಮ್ಮೆ.

ಇತ್ತೀಚಿನ ನನ್ನ ಕಾಂತಾರ ಸಿನಿಮಾದಲ್ಲಿ ಸಹ, ನಿಸರ್ಗದ ಮಡಿಲಲ್ಲಿ, ಮನುಷ್ಯನ ಜೀವನ, ಜನರ ಸ್ಥಳೀಯ ನಂಬಿಕೆ, ಆಚರಣೆ ಕುರಿತ ಪ್ರಮುಖ ಅಂಶಗಳು ಅಡಕವಾಗಿವೆ. ಪರಿಸರದ ಜತೆ ನಾವು ಹೊಂದಿರುವ ನಂಟು, ಅದು ನಮ್ಮ ಮೇಲೆ ಬೀರುವ ಪರಿಣಾಮ ಸಹಬಾಳ್ವೆ, ಸಾಂಸ್ಕೃತಿಕ ಹಿರಿಮೆಗಳು ಹೇಗೆ ಪರಸ್ಪರ ಅವಲಂಬಿಸಿದೆ ಎಂಬುದನ್ನು ಕಾಂತಾರ ಸಿನಿಮಾ ತೋರಿಸಿದೆ. ಸ್ಥಳೀಯ ಪರಿಸರ ರಕ್ಷಣೆ, ಇದರಲ್ಲಿ ಸರ್ಕಾರದ ಪಾತ್ರ, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದಾಯಗಳ ಪ್ರಾಮುಖ್ಯತೆಗಳನ್ನು ಸಿನಿಮಾ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಸವಾಲುಗಳನ್ನು ಎದುರಿಸಲು, ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಫೂರ್ತಿ ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ, ಪರಿಸರ ರಕ್ಷಣೆಯಲ್ಲಿ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು, ಪ್ರೋತ್ಸಾಹಿಸಬೇಕು ಎಂಬುದಾಗಿ ಕಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಮಾರ್ಚ್ 17 ರಂದು ವಿಶ್ವಸಂಸ್ಥೆಯಲ್ಲಿ ಪ್ರದರ್ಶನಗೊಳ್ಳಲಿದೆ. ವಿಶ್ವಸಂಸ್ಥೆಯ ಕೆಲ ಕೌನ್ಸಿಲ್ ಮೆಂಬರ್​ಗಳೊಟ್ಟಿಗೆ ರಿಷಬ್ ಸಹ ಸಿನಿಮಾ ವೀಕ್ಷಿಸಲಿದ್ದಾರೆ. ಮಾತ್ರವಲ್ಲದೆ ಭೋಜನ ಕೂಟದಲ್ಲಿಯೂ ಭಾಗವಹಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!