7.3 C
Munich
Saturday, April 1, 2023

RRR movie actor Jr NTR lands in Hyderabad after Oscar event: Fans give grand welcome | Jr NTR: ಆಸ್ಕರ್​ ಸಮಾರಂಭ ಮುಗಿಸಿ ಬಂದ ಜೂ. ಎನ್​ಟಿಆರ್​; ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

ಓದಲೇಬೇಕು

Jr NTR at Hyderabad Airport: ‘ನಾಟು ನಾಟು..’ ಗೀತೆ ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಅವರ ಅಭಿಮಾನಿ ಬಳಗ ಕೂಡ ಹಿರಿದಾಗಿದೆ.

ಜೂನಿಯರ್​ ಎನ್​ಟಿಆರ್

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ವಿಶ್ವಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ ಪ್ರಶಸ್ತಿ ಗೆದ್ದಿದೆ. ಲಾಸ್​ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿ ಆಗಲು ಜೂನಿಯರ್​ ಎನ್​ಟಿಆರ್​ ಅಮೆರಿಕಕ್ಕೆ ತೆರಳಿದ್ದರು. ಈಗ ಅವರು ಭಾರತಕ್ಕೆ ವಾಪಸ್​ ಬಂದಿದ್ದಾರೆ. ಹೈದರಾಬಾದ್​ನ ವಿಮಾನ ನಿಲ್ದಾಣದಲ್ಲಿ (Hyderabad Airport) ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಗಿದೆ. ಏರ್​ಪೋರ್ಟ್​ನಿಂದ ಹೊರಬರುತ್ತಿದ್ದಂತೆಯೇ ಅಭಿಮಾನಿಗಳು (Jr NTR Fans) ಅವರ ಕಾರನ್ನು ಮುತ್ತಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

‘ನಾಟು ನಾಟು..’ ಹಾಡಿನಲ್ಲಿ ರಾಮ್​ ಚರಣ್​ ಜೊತೆಗೆ ಜೂನಿಯರ್​ ಎನ್​ಟಿಆರ್​ ಅವರು ಡ್ಯಾನ್ಸ್​ ಮಾಡಿದ ಪರಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಎಂಎಂ ಕೀರವಾಣಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಹಾಡನ್ನು ಜಗತ್ತಿನಾದ್ಯಂತ ಇರುವ ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಈ ಗೀತೆಯು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಹೆಚ್ಚಾಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೂನಿಯರ್​ ಎನ್​ಟಿಆರ್​ ಹಾಗೂ ರಾಮ್​ ಚರಣ್​ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ವೇದಿಕೆ ಮೇಲೆ ಹೆಜ್ಜೆ ಹಾಕಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಸೂಕ್ತ ರಿಹರ್ಸಲ್​ ಮಾಡಲು ಸಮಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಆಸ್ಕರ್​ ವೇದಿಕೆ ಏರಲಿಲ್ಲ. ಆ ಬಗ್ಗೆ ಅವರು ಮೊದಲೇ ಮಾಹಿತಿ ಹಂಚಿಕೊಂಡಿದ್ದರು. ‘ನಾನು ಡ್ಯಾನ್ಸ್​ ಮಾಡಬೇಕು ಅಂತ ಅಂದುಕೊಂಡಿದ್ದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ರಿಹರ್ಸಲ್​ ಮಾಡಲು ನಮಗೆ ಸಮಯ ಸಿಕ್ಕಿಲ್ಲ. ನಾವು ಸೂಕ್ತ ತಯಾರಿ ಮಾಡಿಕೊಳ್ಳದೇ ಜಗತ್ತಿನ ಅತಿ ದೊಡ್ಡ ವೇದಿಕೆ ಏರಲು ಆಗುವುದಿಲ್ಲ’ ಎಂದು ಜೂನಿಯರ್​ ಎನ್​ಟಿಆರ್​ ಹೇಳಿದ್ದರು.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

ಜೂನಿಯರ್​ ಎನ್​ಟಿಆರ್​ ಅಭಿನಯದ ಹೊಸ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘ಎನ್​ಟಿಆರ್​ 30’ ಎಂದು ಕರೆಯಲಾಗುತ್ತಿದೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜೋಡಿಯಾಗಿ ಜಾನ್ವಿ ಕಪೂರ್​ ನಟಿಸುತ್ತಿದ್ದಾರೆ. ‘ಎನ್​ಟಿಆರ್​ 30’ ಪೂರ್ಣಗೊಂಡ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಪ್ರಶಾಂತ್​ ನೀಲ್​ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!