ಲೈಸೆನ್ಸ್ ನವೀಕರಿಸದೇ ರಿವಾಲ್ವರ್ ಇಟ್ಟುಕೊಂಡಿದ್ದ ಆರೋಪದಡಿ ಶಸ್ತ್ರಾಸ್ತ್ರ ಕಾಯ್ದೆಯಡಿ ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಷೇಶ ನ್ಯಾಯಾಲಯ ಆದೇಶ ನೀಡಿದೆ.
Image Credit source: ndtv.com
ಬೆಂಗಳೂರು: ಲೈಸೆನ್ಸ್ ನವೀಕರಿಸದೇ ರಿವಾಲ್ವರ್ ಇಟ್ಟುಕೊಂಡಿದ್ದ ಆರೋಪದಡಿ ಶಸ್ತ್ರಾಸ್ತ್ರ ಕಾಯ್ದೆಯಡಿ ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ (Somashekahr Reddy) ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಷೇಶ ನ್ಯಾಯಾಲಯ ಆದೇಶ ನೀಡಿತ್ತು. ಶಿಕ್ಷೆ ಪ್ರಶ್ನಿಸಿ ಸೋಮಶೇಖರ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ಕೋರ್ಟ್ ಮೇಲ್ಮನವಿ ವಜಾಗೊಳಿಸಿದೆ. 2013ರಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಕರಣ ದಾಖಲಿಸಿದ್ದರು. 2009 ಡಿ.31 ಕ್ಕೆ ರಿವಾಲ್ವರ್ ಲೈಸೆನ್ಸ್ ಅವಧಿ ಮುಕ್ತಾಯವಾಗಿತ್ತು. 2011 ನ.10 ರವರೆಗೆ ಲೈಸೆನ್ಸ್ ನವೀಕರಿಸದೇ ರಿವಾಲ್ವರ್ ಇಟ್ಟುಕೊಂಡಿದ್ದರು. ಹೀಗಾಗಿ ಸೋಮಶೇಖರ ರೆಡ್ಡಿ ವಿರುದ್ಧ ಕೇಸ್ ದಾಖಲಾಗಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಪ್ರೊಬೇಷನ್ ಆಫ್ ಅಫೆಂಡರ್ಸ್ ಕಾಯ್ದೆಯಡಿ ಉತ್ತಮ ನಡವಳಿಕೆ ಆಧಾರದಲ್ಲಿ ಬಿಡುಗಡೆ ಮಾಡಿತ್ತು. 50 ಸಾವಿರ ಬಾಂಡ್, ಒಬ್ಬರ ಶ್ಯೂರಿಟಿ ನೀಡಲು ಸೂಚಿಸಿತ್ತು.
ಶಾಂತಿ, ಉತ್ತಮ ನಡತೆ ಮುಂದುವರಿಸಲು ಷರತ್ತು ಹಾಕಲಾಗಿತ್ತು. ಕ್ರಿಮಿನಲ್ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಸೂಚಿಸಿತ್ತು. ಒಂದು ವರ್ಷ ಕೋರ್ಟ್ ನಿಗಾದಲ್ಲಿರಬೇಕೆಂದು ಷರತ್ತು ವಿಧಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಎತ್ತಿ ಹಿಡಿದ ಸೆಷನ್ಸ್ ಕೋರ್ಟ್
ನ್ಯಾಯಾಧೀಶ ಬಿ.ಜಯಂತ ಕುಮಾರ್ ಆದೇಶ ಹೊರಡಿಸಿದ್ದಾರೆ.
ವಿದೇಶ ಪ್ರಮಾಣ ಮಾಡುವಂತಿಲ್ಲ
ಒಂದು ವರ್ಷದ ಅವಧಿಗೆ ಷರತ್ತುಗಳ ಮೇಲೆ ಅವರನ್ನು ಬಿಡುಗಡೆ ಮಾಡಲಾಗುತ್ತಿದ್ದರೂ, ಮೂರು ತಿಂಗಳಿಗೊಮ್ಮೆ ಅವರು
ನ್ಯಾಯಾಲಯದ ಮುಂದೆ ಹಾಜರಾಗಬೇಕು. ಅಶಾಂತಿಗೆ ಕಾರಣವಾಗುವಂಥ ಯಾವುದೇ ಪ್ರಕರಣಗಳಲ್ಲಿ ಸೇರಬಾರದು. ಶಸ್ತ್ರಸ್ತ್ರ ಕಾಯ್ದೆಯಡಿ ಅವರು 50 ಸಾವಿರ ಬಾಂಡ್ ನೀಡಬೇಕು. ನ್ಯಾಯಾಲಯದ ಅನುಮತಿಯಿಲ್ಲದೆ ಯಾವುದೇ ವಿದೇಶ ಪ್ರಮಾಣ
ಮಾಡುವಂತಿಲ್ಲ ಎನ್ನುವ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.