-1.3 C
Munich
Thursday, March 2, 2023

Siddaramaiah to defeat In Kolar Assembly Poll 2023 Says BJP Leader KS Eshwarappa | ಕೋಲಾರದಲ್ಲಿ ಸಿದ್ದರಾಮಯ್ಯರನ್ನ ಬಿಜೆಪಿಗಿಂತ ಕಾಂಗ್ರೆಸ್​ನವರೇ ಸೋಲಿಸ್ತಾರೆ: ಈಶ್ವರಪ್ಪ ಬಾಂಬ್

ಓದಲೇಬೇಕು

ಕೋಲಾರದಲ್ಲಿ ಸಿದ್ದರಾಮಯ್ಯರನ್ನ ಬಿಜೆಪಿಗಿಂತ ಕಾಂಗ್ರೆಸ್​ನವರೇ ಸೋಲಿಸ್ತಾರೆ ಎಂದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇನ್ನು ನಿನ್ನೆ ವಿಜಯ ಸಂಕಲ್ಪ ಯಾತ್ರೆಗೆ ಸೋಮಣ್ಣ ಗೈರಾಗರಿರುವುದಕ್ಕೆ ಕಾರಣವನ್ನು ಕೊಟ್ಟಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ

ಚಾಮರಾಜನಗರ: ಸಿದ್ದರಾಮಯ್ಯರನ್ನು (Siddaramaiah) ಕೋಲಾರದಲ್ಲಿ ನಿಲ್ಲಲ್ಲು ಹೈಕಮಾಂಡ್ ಹೇಳಿತ್ತಾ? ಚುನಾವಣೆ ಸೋಲುವ ಭಯದಿಂದ ಕೋಲಾರಕ್ಕೆ (Kolar)ಹೋಗಿದ್ದಾರೆ. ಇದೀಗ ಇವರನ್ನ ಬಿಜೆಪಿಗಿಂತ ಕಾಂಗ್ರೆಸ್ ಪಾರ್ಟಿ ಒಳಗಿರುವವರೆ ಸೋಲಿಸುತ್ತಾರೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ (KS Eshwarappa) ಬಾಂಬ್ ಸಿಡಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಈಶ್ವರಪ್ಪ, ನಿಮಗೆ ಸಿಎಂ ಪ್ರತಿಸ್ಪರ್ಧಿ ಅಂತ ಪರಮೇಶ್ವರ್ ಸೋಲಿಸಿದ್ರಿ. ರಮೇಶ್ ಕುಮಾರ್‌ ಮೂಲಕ ಮುನಿಯಪ್ಪ ಸೋಲಿಸಿದ್ರಿ. ಒಂದು‌ ಕಡೆ ಒಕ್ಕಲಿಗರು, ದಲಿತರು ಸಿದ್ದರಾಮಯ್ಯ ಸೋಲಿಸಲು ಕಾಯುತ್ತಿದ್ದಾರೆ. ಈ ಎರಡು ಸಮುದಾಯದವರು ಕೈ ಬಿಟ್ಟಿರುವುದಕ್ಕೆ ಮುಸ್ಲಿಂ ಓಲೈಕೆಗೆ ಮುಂದಾಗಿದ್ದಾರೆ ಎಂದರು.

ಇದನ್ನೂ ಓದಿ: Vijaya Sankalp Yatra: ನಡ್ಡಾ ಕಾರ್ಯಕ್ರಮಕ್ಕೆ ಗೈರಾದ ವಿ ಸೋಮಣ್ಣ, ಕುತೂಹಲ ಮೂಡಿಸಿತು ಸಚಿವರ ನಡೆ

ಇನ್ನು ಇದೇ ವೇಳೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ (Vijaya Sankalp Yatra) ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಗೈರು ಆಗಿರುವುದಕ್ಕೆ ಪ್ರಕ್ರಿಯಿಸಿದ ಈಶ್ವರಪ್ಪ, ಸೋಮಣ್ಣಗೆ ಆರೋಗ್ಯ ಸರಿ ಇಲ್ಲ. ಹಾಗಾಗಿ ಕಾರ್ಯಕ್ರಮಕ್ಕೆ ಬಂದಿಲ್ಲ. ಯಡಿಯೂರಪ್ಪ ಸೋಮಣ್ಣ ನಡುವೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ. ನಾನು ಕೂಡ ಯಡಿಯೂರಪ್ಪರನವರ ಕೆಲ ಕಾರ್ಯಕ್ರಮಕ್ಕೆ ಹೋಗಿಲ್ಲ. ಇದನ್ನು ಮುಸುಕಿನ ಗುದ್ದಾಟ ಎಂದು ಹೇಳೋಕೆ ಆಗುತ್ತಾ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿನ್ನೆ (ಮಾ.1) ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದ್ದರು. ಆದರೆ ಜಿಲ್ಲೆಯ ಉಸ್ತುವಾರಿ ಸಚಿವ ಆಗಿರುವ ವಿ.ಸೋಮಣ್ಣ ಮಾತ್ರ ಯಾತ್ರೆಗೆ ಗೈರಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಂದರೂ, ಯಾತ್ರೆಗೆ ಆಗಮಿಸದ ಸಚಿವ ವಿ.ಸೋಮಣ್ಣ ನಡೆ ಸದ್ಯ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಕುಮಾರಸ್ವಾಮಿ ಸಿಎಂ ಆಗುತ್ತೇನೆ ಎನ್ನುವ ಹೇಳಿಕೆಗೆ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿ, ರಾಜಕಾರಣಿ ಆದವರಿಗೆ ಆಶಾಭಾವ ಇರಬೇಕು ಕುಮಾರಸ್ವಾಮಿಗೆ ಅದೇ ಇರುವುದು. ಭವಾನಿ ತಾನೇ ಅಭ್ಯರ್ಥಿ ಅಂತಾರೆ. ಪಕ್ಷದಲ್ಲಿ ಪಾರ್ಲಿಮೆಂಟರಿ ಬೋರ್ಡ್ ಇರುತ್ತೆ, ವರಿಷ್ಠರು ತೀರ್ಮಾನ ಮಾಡ್ತಾರೆ. ಆದ್ರೆ ಅದ್ಯಾವುದು ಜೆಡಿಎಸ್ ನಲ್ಲಿ ಇಲ್ಲ.ಬಹುಮತ ಬರಲ್ಲ ಅಂತ ಕುಮಾರಸ್ವಾಮಿಗೆ ಗೊತ್ತು. ಯಾರ ಜೊತೆಗಾದ್ರು ಸೇರಿ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಆಸೆ ಇದೆ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!