10.6 C
Munich
Friday, March 10, 2023

Sonia Gandhi Admitted To Delhi Ganga Ram Hospital On Friday | Sonia Gandhi Hospitalised: ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

ಓದಲೇಬೇಕು

UPA Chairperson’s Health Stable, Says Doctors: ಜ್ವರದಿಂದ ಬಾಧಿತರಾಗಿರುವ ಸೋನಿಯಾ ಗಾಂಧಿ ಮಾರ್ಚ್ 3, ಶುಕ್ರವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಸೋನಿಯಾ ಗಾಂಧಿ

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ತುಸು ಅನಾರೋಗ್ಯ ಸಮಸ್ಯೆ ಕಾಡಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯುಪಿಎ ಮುಖ್ಯಸ್ಥೆಯಾಗಿರುವ ಸೋನಿಯಾ ಗಾಂಧಿ ಅವರಿಗೆ ಜ್ವರ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ನೀಡಿದ ಮಾಹಿತಿ ಪ್ರಕಾರ, ಸೋನಿಯಾ ಆರೋಗ್ಯದ ಬಗ್ಗೆ ಕಳವಳ ಪಡುವ ಅಗತ್ಯ ಇಲ್ಲ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ವೈದ್ಯರು ನೀಡಿದ ಮಾಹಿತಿ ಪ್ರಕಾರ ನಿನ್ನೆ, ಮಾರ್ಚ್ 2, ಗುರುವಾರದಂದು ಜ್ವರದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ ಗಂಗಾರಾಮ್ ಆಸ್ಪತ್ರೆಯ ಡಾ. ಡಿ.ಎಸ್. ರಾಣಾ ಅವರು ಈ ಬಗ್ಗೆ ಮಾಹಿತಿ ನೀಡಿ, ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದಾರೆ.

ಜನವರಿ ತಿಂಗಳಲ್ಲೂ ಅವರಿಗೆ ವೈರಲ್ ಸೋಂಕು ತಗುಲಿ ಇದೇ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಆ ಸಂದರ್ಭದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ಪೂರ್ಣವಾಗಿ ಜೊತೆಗಿದ್ದು ನೋಡಿಕೊಂಡಿದ್ದರು. ಆಗ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದರು. ಆಗ ರಾಹುಲ್ ಗಾಂಧಿ ಪಾದಯಾತ್ರೆಯ ಮಧ್ಯೆ ಬಿಡುವು ಮಾಡಿಕೊಂಡು ಆಸ್ಪತ್ರೆಗೆ ಹೋಗಿ ತಾಯಿಯನ್ನು ನೋಡಿ ಬಂದಿದ್ದರು. ಈಗ ತಮ್ಮ ತಾಯಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿರುವ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾರೆ.

ಇದನ್ನೂ ಓದಿHijab Row: ಮಾ.9ಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ಹೋಳಿಯ ನಂತರ ಹಿಜಾಬ್ ವಿಚಾರಣೆ ಎಂದ ಸುಪ್ರೀಂ

ಸೋನಿಯಾ ಗಾಂಧಿ ಇತ್ತೀಚಿನ ಕೆಲ ವರ್ಷಗಳಿಂದ ಆಗಾಗ್ಗೆ ಅನಾರೋಗ್ಯಕ್ಕೊಳಗಾಗುತ್ತಿದ್ದಾರೆ. ಇದೇ ಕಾರಣಕ್ಕೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿಲ್ಲ ಎನ್ನಲಾಗಿದೆ. ಕಳೆದ ವರ್ಷ ಅವರು ವಿದೇಶದಲ್ಲೂ ಹೋಗಿ ತಪಾಸಣೆ ಮಾಡಿಸಿಕೊಂಡು ಬಂದಿದ್ದರು. ಕಳೆದ ವರ್ಷ ಅವರಿಗೆ ಕೋವಿಡ್ ಸೋಂಕು ಕೂಡ ತಗುಲಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!