7.5 C
Munich
Tuesday, March 7, 2023

Team India Players Celebrate Holi on Team Bus | VIDEO: ಬಸ್​ನಲ್ಲೇ ರಂಗೀಲಾ…ಭರ್ಜರಿಯಾಗಿ ಹೋಳಿ ಹಬ್ಬ ಆಚರಿಸಿದ ಟೀಮ್ ಇಂಡಿಯಾ

ಓದಲೇಬೇಕು

India vs Australia 4th Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಮಾರ್ಚ್ 9 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ವಶಪಡಿಸಿಕೊಳ್ಳಬಹುದು.

ದೇಶದಾದ್ಯಂತ ರಂಗು ರಂಗಿನ ಹೋಳಿ ಹಬ್ಬವನ್ನು (Holi 2023) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಷಯದಲ್ಲಿ ಟೀಮ್ ಇಂಡಿಯಾ (Team India) ಆಟಗಾರರು ಕೂಡ ಹಿಂದೆ ಬಿದ್ದಿಲ್ಲ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಅಹಮದಾಬಾದ್​ಗೆ ಬಂದಿಳಿದಿದೆ. ಇದರ ನಡುವೆ ಬಸ್​ನಲ್ಲೇ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ.

ಭಾರತ ತಂಡದ ಆಟಗಾರರು ಟೀಮ್ ಬಸ್​ನಲ್ಲೇ ಬಾಲಿವುಡ್​ ಹಾಡಿಗೆ ಕುಣಿಯುತ್ತಾ ಭರ್ಜರಿಯಾಗಿ ಹೋಳಿ ಹಬ್ಬವನ್ನು ಆಚರಿಸಿ ಕುಣಿದು ಕುಪ್ಪಳಿಸಿದ್ದಾರೆ. ಈ ಸಂಭ್ರಮದ ವಿಡಿಯೋವನ್ನು ಟೀಮ್ ಇಂಡಿಯಾ ಆಟಗಾರ ಶುಭ್​ಮನ್ ಗಿಲ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಭಾರತೀಯ ಆಟಗಾರರು ಬಣ್ಣದೋಕುಳಿಯಲ್ಲಿ ಮಿಂದೆದ್ದಿರುವುದು ಕಾಣಬಹುದು. ಅದರಲ್ಲೂ ವಿರಾಟ್ ಕೊಹ್ಲಿ ಹಾಡುತ್ತಾ, ಕುಣಿಯುತ್ತಾ ಫೋಸ್ ನೀಡಿದ್ದಾರೆ. ಇದೀಗ ಟೀಮ್ ಇಂಡಿಯಾ ಆಟಗಾರರ ಹೋಳಿ ಸೆಲೆಬ್ರೇಷನ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ



ಭಾರತ-ಆಸ್ಟ್ರೇಲಿಯಾ 4ನೇ ಟೆಸ್ಟ್ ಪಂದ್ಯ:

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಮಾರ್ಚ್ 9 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ವಶಪಡಿಸಿಕೊಳ್ಳಬಹುದು. ಒಂದು ವೇಳೆ ಸೋತರೆ, ಸರಣಿಯು 2-2 ಅಂತರದಿಂದ ಸಮಗೊಳ್ಳಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯವು ಮಹತ್ವದೆನಿಸಿಕೊಂಡಿದೆ.

ಇದನ್ನೂ ಓದಿ: WPL 2023: ಬಣ್ಣದೋಕುಳಿಯಲ್ಲಿ ಮಿಂದೆದ್ದ RCB ಆಟಗಾರ್ತಿಯರು: ಇಲ್ಲಿದೆ ಫೋಟೋಸ್

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಮತ್ತಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!