6.7 C
Munich
Wednesday, March 22, 2023

Team India will begin the three-match ODI series against Australia with the first ODI at the Wankhede Stadium | IND vs AUS 1st ODI: ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ: ರೋಚಕತೆ ಸೃಷ್ಟಿಸಿದ ಟೀಮ್ ಇಂಡಿಯಾ ಪ್ಲೇಯಿಂಗ್ XI

ಓದಲೇಬೇಕು

India Plying XI vs AUS 1st ODI: ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕೊನೆಯ ಟೆಸ್ಟ್ ಪಂದ್ಯದಲ್ಲಿ ಗಿಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದು ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ತೋರಿದ್ದ ಭಾರತ (India vs Australia) 2-1 ಅಂಕಗಳ ಅಂತರದಿಂದ ಗೆದ್ದು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿತು. ಇದೀಗ ಟೆಸ್ಟ್ ಸರಣಿ ಬಳಿಕ ಉಭಯ ತಂಡಗಳು ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ವರ್ಷಾಂತ್ಯದ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಈ ಇಂಡೋ-ಆಸೀಸ್ ಏಕದಿನ ಕದನ ಕುತೂಹಲ ಕೆರಳಿಸಿದೆ. ಈ ಏಕದಿನ ಪಂದ್ಯದಿಂದ ರೋಹಿತ್ ಶರ್ಮಾ (Rohit Shrma) ಹೊರಗುಳಿದಿದ್ದು ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕೊನೆಯ ಟೆಸ್ಟ್ ಪಂದ್ಯದಲ್ಲಿ ಗಿಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದು ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಕೊಹ್ಲಿ ಕೂಡ ಅಮೋಘ ಲಯದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ವಿಕೆಟ್ ಕೀಪರ್ ಜವಾಬ್ದಾರಿ ಕೆಎಲ್ ರಾಹುಲ್ ವಹಿಸಿಗೊಳ್ಳಲಿದ್ದಾರೆ. ಆಲ್ರೌಂಡರ್​ಗಳಾಗಿ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಇದ್ದಾರೆ.

IND vs AUS: ಮೊದಲ ಪಂದ್ಯಕ್ಕೆ 5+3+2+1 ಸೂತ್ರದೊಂದಿಗೆ ಕಣಕ್ಕಿಳಿಯುತ್ತಾ ಭಾರತ? ಹೀಗಿದೆ ಸಂಭಾವ್ಯ ತಂಡ

ಇದನ್ನೂ ಓದಿ



ಭಾರತದ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗಿದೆ. ಸ್ಪಿನ್ ವಿಭಾಗದ ಪೈಕಿ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ವೇಗಿಗಳಾಗಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮ್ರಾನ್ ಮಲಿಕ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದುಕೊಳ್ಳಬಹುದು. ಶಾರ್ದೂಲ್ ಥಾಕೂರ್, ಜಯದೇವ್ ಉನದ್ಕಟ್ ಆಯ್ಕೆ ಕೂಡ ಇದೆ.

ಇತ್ತ ಆಸೀಸ್ ತಂಡವನ್ನು ಸ್ಟೀವ್ ಸ್ಮಿತ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಡೇವಿಡ್ ವಾರ್ನರ್ ಗಾಯದಿಂದ ಚೇತರಿಸಿಕೊಂಡು ಬಂದಿದ್ದು ಅಪಾಯಕಾರಿ ಆಗಿ ಗೋಚರಿಸಲಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್​ಗೆ ಇದು ಕಮ್​ಬ್ಯಾಕ್ ಪಂದ್ಯ ಆಗಬಹುದು. ಮಿಚೆಲ್ ಮಾರ್ಷ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರು ಯಾವುದೇ ಕ್ರಮಾಂಕದಲ್ಲಿಯೂ ಕ್ರೀಸ್‌ಗೆ ಬಂದು ಮಿಂಚುವ ತಾಕತ್ತು ಹೊಂದಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 143 ಏಕದಿನ ಪಂದ್ಯಗಳು ನಡೆದಿವೆ. ಈ ಪಂದ್ಯಗಳಲ್ಲಿ ಕಾಂಗರೂಗಳು ಪ್ರಾಬಲ್ಯ ಮೆರೆದಿದ್ದಾರೆ. ಆಸ್ಟ್ರೇಲಿಯಾ 80 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ 53 ಪಂದ್ಯಗಳನ್ನು ಗೆದ್ದಿದೆ. 10 ಪಂದ್ಯಗಳು ಅಪೂರ್ಣವಾಗಿವೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿದೆ. ಅಲ್ಲದೆ, ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಕೂಡ ನೀವು ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನಾದ್ಕಟ್,

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜೈ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!