0.2 C
Munich
Monday, March 27, 2023

Third-year BTech student of IIT-Madras died by suicide Second Case In A Month | ಐಐಟಿ ಮದ್ರಾಸ್​​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ

ಓದಲೇಬೇಕು

ಫೆಬ್ರವರಿ 14 ರಂದು ಐಐಟಿ ಮದ್ರಾಸ್‌ನಲ್ಲಿ ಇಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ

ಐಐಟಿ ಮದ್ರಾಸ್

ಚೆನ್ನೈ: ಐಐಟಿ-ಮದ್ರಾಸ್‌ನ (IIT Madras) ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆರೆಯ ಆಂಧ್ರಪ್ರದೇಶದ (Andhra Pradesh) ನಿವಾಸಿಯಾಗಿರುವ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ 20 ವರ್ಷದ ವಿದ್ಯಾರ್ಥಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಸಹಪಾಠಿಗಳು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.ಪ್ರಾಥಮಿಕ ತನಿಖೆಯು ವಿದ್ಯಾರ್ಥಿಯು ಅವನ ಅಧ್ಯಯನದ ಮೇಲೆ ಕೇಂದ್ರೀಕರಿಸಲು ಮತ್ತು ತನ್ನ ಶೈಕ್ಷಣಿಕ ಕಾರ್ಯಗಳನ್ನು ಪೂರ್ಣಗೊಳಿಸಲು ಕಷ್ಟ ಪಡುತ್ತಿದ್ದುದರಿಂದ ಈ ಬದುಕು ಕೊನೆಗೊಳಿಸಿಲು ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಈ ವಿಷಯವನ್ನು ತನಿಖೆ ಮಾಡುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನಿಖೆ ಮತ್ತು ಶವಪರೀಕ್ಷೆ ಪೂರ್ಣಗೊಂಡ ನಂತರವೇ ಹೆಚ್ಚಿನ ಪ್ರತಿಕ್ರಿಯೆಗಳನ್ನು ನೀಡಬಹುದು ಎಂದು ಅವರು ಹೇಳಿದರು. ಫೆಬ್ರವರಿ 14 ರಂದು ಐಐಟಿ ಮದ್ರಾಸ್‌ನಲ್ಲಿ ಇಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ. ಆ ವಿದ್ಯಾರ್ಥಿ ಸಹ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದ.

ಇದನ್ನೂ ಓದಿ:ವಿಪಕ್ಷಗಳ ಟೀಕೆಗೆ ತಲೆ ಕೆಡಿಸದೆ ಮುಂದೆ ಸಾಗುವ ಪ್ರಧಾನಿ, ಮೋದಿ ಸರ್ಕಾರದ ಸಾಧನೆಯನ್ನು ತೋರಿಸುವ ವಿಡಿಯೊ ಟ್ವೀಟ್ ಮಾಡಿದ ಬಿಜೆಪಿ

ಮಾರ್ಚ್ 14, 2023 ರಂದು ಐಐಟಿ ಮದ್ರಾಸ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ಅಕಾಲಿಕ ಮರಣ ಹೊಂದಿರುವುದನ್ನು ತೀವ್ರ ದುಃಖದಿಂದ ತಿಳಿಸುತ್ತೇವೆ ಕೊವಿಡ್ ನಂತರದ ಪರಿಸರವು ಸವಾಲಿನದ್ದಾಗಿದೆ. ಕ್ಯಾಂಪಸ್‌ನಲ್ಲಿರುವ ವಿದ್ಯಾರ್ಥಿಗಳು ಅಧ್ಯಾಪಕರು ಮತ್ತು ಸಿಬ್ಬಂದಿಗಳ ಯೋಗಕ್ಷೇಮವನ್ನು ಸುಧಾರಿಸಿ ಮತ್ತು ಉಳಿಸಿಕೊಳ್ಳಲು, ನಿರಂತರವಾಗಿ ಸ್ಥಳದಲ್ಲಿ ವಿವಿಧ ಬೆಂಬಲ ವ್ಯವಸ್ಥೆಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ ಎಂದು ಐಐಟಿ ಮದ್ರಾಸ್ ಹೇಳಿಕೆಯಲ್ಲಿ ತಿಳಿಸಿದೆ.

ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳನ್ನು ಒಳಗೊಂಡಂತೆ ಸ್ಥಾಯೀ ಸಂಸ್ಥೆಯ ಆಂತರಿಕ ವಿಚಾರಣಾ ಸಮಿತಿಯು ಇತ್ತೀಚೆಗೆ ರಚಿತವಾದ ಇಂತಹ ಘಟನೆಗಳನ್ನು ಪರಿಶೀಲಿಸುತ್ತದೆ. ವಿದ್ಯಾರ್ಥಿಯ ಪೋಷಕರಿಗೆ ತಿಳಿಸಲಾಗಿದೆ. ಈ ಕ್ಷಣದಲ್ಲಿ ದಯವಿಟ್ಟು ಕುಟುಂಬದ ಗೌಪ್ಯತೆಯನ್ನು ಗೌರವಿಸುವಂತೆ ನಾವು ಪ್ರತಿಯೊಬ್ಬರನ್ನು ವಿನಂತಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!