ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನವನ್ನು ತಡೆಯಲು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನಿವಾಸದ ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ

ಇಮ್ರಾನ್ ಖಾನ್
ಲಾಹೋರ್‌ನಲ್ಲಿರುವ ಇಮ್ರಾನ್ ಖಾನ್ (Imran Khan) ಅವರ ಮನೆಯ ಕಾಂಪೌಂಡ್‌ಗೆ ಪೊಲೀಸರು ಮಂಗಳವಾರ ಅಶ್ರುವಾಯು ಪ್ರಯೋಗಿಸಿದ್ದಾರೆ. ತೋಶಖಾನಾ ಪ್ರಕರಣದಲ್ಲಿ (Toshakhana case )ಅವರ ಬಂಧನವನ್ನು ತಡೆಯಲು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನಿವಾಸದ ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ. ಪಾಕಿಸ್ತಾನದ ಪೊಲೀಸರು ಮತ್ತು ಇಮ್ರಾನ್ ಖಾನ್ ಅವರ ಬೆಂಬಲಿಗರು ಮಂಗಳವಾರ ಲಾಹೋರ್‌ನ ಪೂರ್ವ ನಗರದಲ್ಲಿರುವ ಮಾಜಿ ಪ್ರಧಾನಿ ಮನೆಯ ಹೊರಗೆ ಮುಖಮುಖಿಯಾಗಿದ್ದು ಅವರ ಸಂಭವನೀಯ ಬಂಧನಕ್ಕೆ ಮುಂಚಿತವಾಗಿ ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)