-3.7 C
Munich
Sunday, February 26, 2023

Vivo Y75 5G: ಭಾರತದಲ್ಲಿ ವಿವೋ Y75 5G ಫೋನ್ ಬಿಡುಗಡೆ ಬೆಲೆ? 50MP ಕ್ಯಾಮೆರಾ, 5000mAh ಬ್ಯಾಟರಿ

ಓದಲೇಬೇಕು

Vivo Y75 5G

ವಿವೋ ಇದೀಗ ತನ್ನ ಹೊಸ ವಿವೋ Y75 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ.

ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡುತ್ತಿದೆ. ವರ್ಷದ ಮೊದಲ ತಿಂಗಳಲ್ಲೇ 3,4 ಫೋನ್​ಗಳನ್ನು ಪರಿಚಯಿಸಿರುವ ವಿವೋ ಇದೀಗ ತನ್ನ ಹೊಸ ವಿವೋ ವೈ75 5ಜಿ (Vivo Y75 5G) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ. 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ. ಮೀಡಿಯಾಟೆಕ್‌ ಡೈಮೆನ್ಸಿಟಿ ಪ್ರೊಸೆಸರ್ ಅನ್ನು ಅಳವಡಿಸಲಾಗಿದ್ದು ಆಕರ್ಷಕ ಡಿಸೈನ್​ನಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡುವುದಾದರೆ…

ವಿವೋ Y75 5G ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90.37 % ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ ಎಫ್‌ನೊಂದಿಗೆ 2 ಮೆಗಾಪಿಕ್ಸೆಲ್ ಬೊಕೆ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ವಿವೋನ ಎಕ್ಸ್‌ಟ್ರೀಮ್ ನೈಟ್ AI ಆಧಾರಿತ ಅಲ್ಗಾರಿದಮ್ ಅನ್ನು ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 5G, 4G LTE, ಬ್ಲೂಟೂತ್ 5.1, Wi-Fi, GPS ಮತ್ತು FM ರೇಡಿಯೋ ಬೆಂಬಲವನ್ನು ಒಳಗೊಂಡಿದೆ. ಭಾರತದಲ್ಲಿ ವಿವೋ Y75 5G ಸ್ಮಾರ್ಟ್‌ಫೋನ್‌ ಬೆಲೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯದ 21,990 ರೂ. ನಿಗದಿ ಮಾಡಲಾಗಿದೆ. ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಪಾಲುದಾರ ಚಿಲ್ಲರೆ ಅಂಗಡಿಗಳಲ್ಲಿ ಈ ಫೋನನ್ನು ಖರೀದಿಸಬಹುದು.

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!