8.6 C
Munich
Sunday, March 26, 2023

Who Won Man of the Series India vs Australia Test series 2023? | IND vs AUS: ‘ರವಿ’ಗಳ ನಡುವೆ ಪೈಪೋಟಿ: ಸರಣಿ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?

ಓದಲೇಬೇಕು

India vs Australia: ಅಂತಿಮ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳ ಬ್ಯಾಟರ್​ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಅಹಮದಾಬಾದ್ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ.

Ravichandran Ashwin-Ravindra Jadeja

India vs Australia: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ (Team India) ಗೆದ್ದುಕೊಂಡಿದೆ. ನಾಲ್ಕು ಪಂದ್ಯಗಳ ಈ ಸರಣಿಯ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡರೆ, ಇಂದೋರ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿತ್ತು. ಹೀಗಾಗಿಯೇ ಅಹಮದಾಬಾದ್​ನಲ್ಲಿ​ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಡ್ರಾ ಮಾಡಿಕೊಳ್ಳುವ ಉತ್ತಮ ಅವಕಾಶ ಆಸ್ಟ್ರೇಲಿಯಾ ತಂಡದ ಮುಂದಿತ್ತು.

ಆದರೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳ ಬ್ಯಾಟರ್​ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಅಹಮದಾಬಾದ್ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ಟೀಮ್ ಇಂಡಿಯಾ ಸತತ ನಾಲ್ಕನೇ ಬಾರಿ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಂತಾಗಿದೆ.

ಈ ಸರಣಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದು ಟೀಮ್ ಇಂಡಿಯಾದ ಆಲ್​ರೌಂಡರ್​ಗಳು. ಅದರಲ್ಲೂ ರವಿಚಂದ್ರನ್ ಅಶ್ವಿನ್ ಹಾಗೂ ರವೀಂವೀದ್ರ ಜಡೇಜಾ ಸರಣಿಯುದ್ದಕ್ಕೂ ಅತ್ಯಾದ್ಭುತ ಸ್ಪಿನ್ ಮೋಡಿ ಮಾಡಿದ್ದರು. ಹೀಗಾಗಿಯೇ ಆರಂಭದಿಂದಲೇ  ಇವರಿಬ್ಬರಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗಾಗಿ ಭರ್ಜರಿ ಪೈಪೋಟಿ ಕಂಡು ಬಂದಿದೆ.

ಇದನ್ನೂ ಓದಿ



ಏಕೆಂದರೆ 4 ಪಂದ್ಯಗಳಲ್ಲಿ ರವಿಚಂದ್ರನ್ ಅಶ್ವಿನ್ 25 ವಿಕೆಟ್ ಪಡೆದು ಮಿಂಚಿದ್ದರು. ಹಾಗೆಯೇ ಬ್ಯಾಟ್​ ಮೂಲಕ 86 ರನ್​ಗಳ ಕಾಣಿಕೆ ನೀಡಿದ್ದರು. ಮತ್ತೊಂದೆಡೆ ರವೀಂದ್ರ ಜಡೇಜಾ ಬ್ಯಾಟ್ ಮೂಲಕ 135 ರನ್​ಗಳಿಸಿದರೆ, ತಮ್ಮ ಸ್ಪಿನ್ ಮೋಡಿಯ ಮೂಲಕ 22 ವಿಕೆಟ್ ಉರುಳಿಸಿದ್ದರು.

ಈ ಇಬ್ಬರ ಅದ್ಭುತ ಪ್ರದರ್ಶನದ ಫಲವಾಗಿ ಟೀಮ್ ಇಂಡಿಯಾ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ನೀರಸವಾಗಿ ಗೆದ್ದುಕೊಂಡಿತು. ಆದರೆ ಕೊನೆಯ ಟೆಸ್ಟ್ ಪಂದ್ಯದ ಅಂತ್ಯದೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಯಾರಿಗೆ ನೀಡಬೇಕೆಂಬ ಗೊಂದಲ ಏರ್ಪಟ್ಟಿದೆ. ಇದಾಗ್ಯೂ ಅಂತಿಮವಾಗಿ ಇಬ್ಬರನ್ನು ಜಂಟಿಯಾಗಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅದರಂತೆ 2023ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿಯು ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ಒಲಿದಿದೆ. ಇನ್ನು ಕೊನೆಯ ಟೆಸ್ಟ್ ಪಂದ್ಯದಲ್ಲಿ 186 ರನ್​ಗಳಿಸಿ ಮಿಂಚಿದ್ದ ವಿರಾಟ್ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್ , ಸ್ಟೀವನ್ ಸ್ಮಿತ್ (ನಾಯಕ) ಪೀಟರ್ ಹ್ಯಾಂಡ್ಸ್​ಕಾಂಬ್ , ಕ್ಯಾಮರೂನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ಮ್ಯಾಥ್ಯೂ ಕುಹ್ನೆಮನ್ , ಟಾಡ್ ಮರ್ಫಿ , ನಾಥನ್ ಲಿಯಾನ್.

ಇದನ್ನೂ ಓದಿ: Virat Kohli: ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ಕಿಂಗ್ ಕೊಹ್ಲಿ

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ (ಗಾಯಾಳು), ಶ್ರೀಕರ್ ಭರತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಉಮೇಶ್ ಯಾದವ್ , ಮೊಹಮ್ಮದ್ ಶಮಿ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!