WPL 2023: ಒಟ್ಟು ಐದು ತಂಡಗಳು ಈ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್ನಲ್ಲಿ ಕಣಕ್ಕಿಳಿಯುತ್ತಿವೆ. ಇದು ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳನ್ನು ಒಳಗೊಂಡಿದೆ.
ಮಹಿಳಾ ಪ್ರೀಮಿಯರ್ ಲೀಗ್
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (WPL 2023) ಮಾರ್ಚ್ 4 ರಿಂದ ಪ್ರಾರಂಭವಾಗಲಿದೆ. ಇದು ಮಹಿಳಾ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಸೀಸನ್ ಆಗಿರುವುದರಿಂದ ಮೊದಲ ಸೀಸನ್ ಅನ್ನು ಅದ್ಧೂರಿಯಾಗಿ ಆಯೋಜಿಸಲು ಬಿಸಿಸಿಐ (BCCI) ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಟೂರ್ನಿಯ ಮೊದಲ ಪಂದ್ಯ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ (Gujarat Giants vs Mumbai Indians) ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸಂಜೆ 5:30 ರಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಸಮಾರಂಭದಲ್ಲಿ ಬಾಲಿವುಡ್ ನಟಿಯರಾದ ಕಿಯಾರಾ ಅಡ್ವಾಣಿ ಮತ್ತು ಕೃತಿ ಸನೋನ್ (Kriti Sanon and Kiara Advani) ಅವರು ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ. ಇವರಿಬ್ಬರ ಜೊತೆಗೆ ಜನಪ್ರಿಯ ಪಂಜಾಬಿ ಗಾಯಕ ಎಪಿ ಧಿಲ್ಲೋನ್ ತಮ್ಮ ಹಾಡುಗಳ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್‌ನ ಅಧಿಕೃತ ಟ್ವಿಟರ್ ಖಾತೆ ಟ್ವೀಟ್‌ನಲ್ಲಿ ಮಾಹಿತಿ ನೀಡಿದೆ. ಈ ಅದ್ಧೂರಿ ಆಚರಣೆಗೆ ಅಭಿಮಾನಿಗಳು ಕೂಡ ಉತ್ಸುಕರಾಗಿದ್ದಾರೆ.
ಮತ್ತೊಂದೆಡೆ, ನಾವು ಈ ಮೆಗಾ ಟಿ20 ಲೀಗ್ ಬಗ್ಗೆ ಮಾತನಾಡುವುದಾದರೆ, ಒಟ್ಟು ಐದು ತಂಡಗಳು ಈ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್ನಲ್ಲಿ ಕಣಕ್ಕಿಳಿಯುತ್ತಿವೆ. ಇದು ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳನ್ನು ಒಳಗೊಂಡಿದೆ. ಟೂರ್ನಿಯಲ್ಲಿ ಲೀಗ್ ಪಂದ್ಯಗಳ ನಂತರ ಎಲಿಮಿನೇಟರ್ ಪಂದ್ಯಗಳನ್ನು ನಡೆಯುತ್ತವೆ. ಇದಾದ ಬಳಿಕ ಮಾರ್ಚ್ 26ರಂದು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯುತ್ತದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ಎರಡನೇ ಫೈನಲಿಸ್ಟ್ ಆಗಿ ಎಂಟ್ರಿಕೊಡಲಿದೆ.
A star ⭐ studded line-up
D.Y.Patil Stadium will be set for an evening of glitz and glamour 👌🏻
𝐃𝐨 𝐍𝐨𝐭 𝐌𝐢𝐬𝐬 the opening ceremony of #TATAWPL
Grab your tickets 🎫 now on https://t.co/c85eyk7GTA pic.twitter.com/2dj4L8USnP
— Women’s Premier League (WPL) (@wplt20) March 1, 2023
ಮಾರ್ಚ್ 5 ರಂದು ಆರ್‌ಸಿಬಿ ಪಂದ್ಯ
ಇನ್ನು ಟೂರ್ನಿ ಆರಂಭಕ್ಕೂ ನಡೆದ ಮೆಗಾ ಹರಾಜಿನಲ್ಲಿ ಹಲವು ಆಟಗಾರ್ತಿಯರು ಕೋಟಿ ಬೆಲೆ ಪಡೆಯುವುದರೊಂದಿಗೆ ಟೂರ್ನಿಗೆ ರಂಗು ತಂದಿದ್ದಾರೆ. ಅವರಲ್ಲಿ ದಾಖಲೆ ಮೊತ್ತಕ್ಕೆ ಆರ್‌ಸಿಬಿ ಪಾಲಾದ ಸ್ಮೃತಿ ಮಂಧಾನ ಹೆಸರು ಕೂಡ ಸೇರಿದೆ. ಫೆಬ್ರವರಿ 13 ರಂದು ನಡೆದ ಮಹಿಳಾ ಪ್ರೀಮಿಯರ್ ಲೀಗ್ ಮೊದಲ ಸೀಸನ್ ಹರಾಜಿನಲ್ಲಿ ಸ್ಮೃತಿ ಮಂಧಾನ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೂ. 3 ಕೋಟಿ 40 ಲಕ್ಷ ನೀಡಿ ಖರೀದಿಸಿತ್ತು. ಬಳಿಕ ಅವರಿಗೆ ತಂಡದ ನಾಯಕತ್ವವನ್ನು ನೀಡಿತ್ತು. ಇದೀಗ ಆರ್‌ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್ 5 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ