17.9 C
Munich
Wednesday, March 22, 2023

WTC Final 2023: Hardik Pandya And Shardul Thakur Test Return | WTC Final 2023: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ಗಾಗಿ ಟೀಮ್ ಇಂಡಿಯಾಗೆ ಇಬ್ಬರ ಎಂಟ್ರಿ..?

ಓದಲೇಬೇಕು

WTC Final 2023: ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ಜೂನ್ 7 ರಿಂದ 11 ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

World Test Championship Final 2023: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಈಗಾಗಲೇ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ. ಬಾರ್ಡರ್​-ಗವಾಸ್ಕರ್ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿರುವ ಟೀಮ್ ಇಂಡಿಯಾ ಇಂಗ್ಲೆಂಡ್​ನ ಪಿಚ್​ಗಾಗಿ ತಂಡದಲ್ಲಿ ಬದಲಾವಣೆ ತರುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯವು ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿದ್ದು, ಈ ಮೈದಾನವು ಸ್ಪಿನ್​ಗಿಂತ ವೇಗದ ಬೌಲರ್​ಗಳು ಹೆಚ್ಚಿನ ನೆರವು ನೀಡಲಿದೆ. ಹೀಗಾಗಿ ಫೈನಲ್​ ಫೈಟ್​ಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬೇಕಿದೆ.

ಏಕೆಂದರೆ ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಬದಲಿ ವೇಗದ ಬೌಲರ್​ನ ಅವಶ್ಯಕತೆ ಟೀಮ್ ಇಂಡಿಯಾ ಮುಂದಿದೆ. ಆದರೆ ಇಲ್ಲಿ ಟೀಮ್ ಇಂಡಿಯಾ ಮುಂದೆ ಇಬ್ಬರು ವೇಗದ ಬೌಲರ್ ಆಲ್​ರೌಂಡರ್​ಗಳ ಆಯ್ಕೆಯಿದ್ದು, ಹೀಗಾಗಿ ಇವರಿಬ್ಬರನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಅವರೆಂದರೆ…

ಹಾರ್ದಿಕ್ ಪಾಂಡ್ಯ: ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ 2018ರಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. ಆದರೆ ಇದೀಗ ಸೀಮಿತ ಓವರ್​ಗಳಲ್ಲಿ ಮ್ಯಾಚ್ ವಿನ್ನರ್ ಪ್ರದರ್ಶನ ನೀಡುವ ಮೂಲಕ ಪಾಂಡ್ಯ ಮಿಂಚುತ್ತಿದ್ದಾರೆ. ಇದೇ ಕಾರಣದಿಂದಾಗಿ ಹಾರ್ದಿಕ್​ಗೆ ಟೆಸ್ಟ್ ತಂಡದಲ್ಲೂ ಸ್ಥಾನ ನೀಡಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.

ಒಂದು ವೇಳೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಿದರೆ, ಹೆಚ್ಚುವರಿ ವೇಗದ ಬೌಲರ್ ಆಗಿ ಬಳಸಿಕೊಳ್ಳಬಹುದು. ಅಲ್ಲದೆ ಕೆಲ ಕ್ರಮಾಂಕದಲ್ಲಿ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಬ್ಯಾಟ್ಸ್​ಮನ್ ಆಗಿ ಕೂಡ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ಹಾರ್ದಿಕ್ ಪಾಂಡ್ಯ ಅವರ ಅಗತ್ಯವಿದೆ ಎಂಬ ಅಭಿಪ್ರಾಯಗಳು ಇದೀಗ ಜೋರಾಗಿದೆ.

ಶಾರ್ದೂಲ್ ಠಾಕೂರ್: ಟೀಮ್ ಇಂಡಿಯಾ ಪರ ಇದುವರೆಗೆ 8 ಟೆಸ್ಟ್ ಪಂದ್ಯಗಳನ್ನು ಆಡಿರುವ ಶಾರ್ದೂಲ್ ಠಾಕೂರ್, ಈ ಹಿಂದೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಮ್ಯಾಚ್​ಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಅದರಲ್ಲೂ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿರುವ ಕಾರಣ ಕೆಲ ಕ್ರಮಾಂಕದಲ್ಲಿ ಅವರಿಂದ ರನ್​ ನಿರೀಕ್ಷಿಸಬಹುದು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಶಾರ್ದೂಲ್ ಠಾಕೂರ್ ಬಗ್ಗೆ ಆಯ್ಕೆಗಾರರು ಯೋಚಿಸಬೇಕು ಎಂದು ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಈಗಾಗಲೇ ಹೇಳಿದ್ದಾರೆ. ಅಕ್ಷರ್ ಪಟೇಲ್ ಬದಲಿಗೆ ಶಾರ್ದೂಲ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ದಿನೇಶ್ ಕಾರ್ತಿಕ್ ಕೂಡ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಶಾರ್ದೂಲ್ ಠಾಕೂರ್ ಕೂಡ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಈ ಇಬ್ಬರು ಆಟಗಾರರ ಸೇರ್ಪಡೆಯೊಂದಿಗೆ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬಹುದು.

ಇದನ್ನೂ ಓದಿ: Virat Kohli: ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ಕಿಂಗ್ ಕೊಹ್ಲಿ

ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ಜೂನ್ 7 ರಿಂದ 11 ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!